This is the title of the web page
This is the title of the web page

ಬಿಜೆಪಿಯಲ್ಲಿನ ಒಳಜಗಳದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸಂಕಟ.?

ಬಿಜೆಪಿಯಲ್ಲಿನ ಒಳಜಗಳದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸಂಕಟ.?

 

ಬೆಳಗಾವಿ / ಚಿಕ್ಕೋಡಿ : ಬೆಳಗಾವಿ ಬಿಜೆಪಿಯಲ್ಲಿ ಬಿರುಕು ಮೂಡಿದ್ದು, ಹಿರಿಯ ನಾಯಕರು ಪಕ್ಷದ ಪ್ರಚಾರಗಳಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಜಿಲ್ಲೆಯ ಸ್ಥಳೀಯ ಬಿಜೆಪಿ ನಾಯಕರ ಒಳಜಗಳ ಇನ್ನೂ ಬಗೆಯರಿಯುವ ಲಕ್ಷಣ ಕಂಡುಬರುತ್ತಿಲ್ಲ. ರಾಮದುರ್ಗ ಬಿಜೆಪಿಯಲ್ಲಿನ ಒಳಜಗಳದಿಂದ ಸಧ್ಯ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಸಂಕಟ ಎದುರಾಗಿದೆ.

ಚುನಾವಣೆ ಸಮಯದಲ್ಲೇ ಕಳೆದ ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಹಾಗೂ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಬಣಗಳ ಒಳ ಜಗಳ ಬೀದಿಗೆ ಬಂದಿದ್ದು ಇದರಿಂದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಇರುಸು, ಮುರುಸು ತರಿಸಿದೆ.

ರಾಮದುರ್ಗ ತಾಲೂಕಿನ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಜೊತೆ ಜಗದೀಶ್ ಶೆಟ್ಟರ್ ಕಾಣಸಿಕೊಳ್ಳುವುದಕ್ಕೆ ಸ್ವತಃ ಚಿಕ್ಕರೇವಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆಯ ಕ್ಷೇತ್ರವಾರು ಸ್ಥಳೀಯ ಜೆಡಿಎಸ್ ಮುಖಂಡರು ಬಿಜೆಪಿ ಪ್ರಚಾರದಲ್ಲಿ  ಕಾಣಿಸಿಕೊಳ್ಳುತ್ತಿಲ್ಲ ಇದು ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು 15 ರಿಂದ 20 ಸಾವಿರ ಮತಗಳು ಇವೆ ಒಂದು ವೇಳೆ ಏನಾದರೂ ಕಾಂಗ್ರೆಸ್ಸಿಗೆ ವಾಲಿದರೆ ಬಿಜೆಪಿಗೆ ಗೆಲ್ಲುವುದು ಕಷ್ಟವಾಗುವುದು ಎಂದು ರಾಜಕೀಯ ಲೆಕ್ಕಚಾರ ಚರ್ಚೆಗೆ ಗ್ರಾಸವಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಜಗದೀಶ್ ಶೆಟ್ಟರ್ ಅವರು ಯಾದವಾಡ ಮನೆಗೆ ಭೇಟಿ ನೀಡಿದ್ದನ್ನು ಚಿಕ್ಕರೇವಣ್ಣ ಬೆಂಬಲಿಗರು ವಿರೋಧಿಸಿದ್ದರು. ಯಾವುದೇ ಕಾರಣಕ್ಕೆ ಯಾದವಾಡ ಕುಟುಂಬದವರು ಬಿಜೆಪಿ ಜೊತೆ ಬರುವುದು ಬೇಡ ಎಂದೇ ಹೇಳಿದ್ದರು

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಚಾರದಿಂದ ಮಾಜಿ ಸಂಸದ ರಮೇಶ ಕತ್ತಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ದೂರ ಉಳಿದಿದ್ದು, ಇದರಿಂದ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ.

ರಮೇಶ್ ಕತ್ತಿ  ಚಿಕ್ಕೋಡಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಹಲವು ಬಾರಿ ಬಿಜೆಪಿ ಕೇಂದ್ರ ನಾಯಕತ್ವವನ್ನು ಸಂಪರ್ಕಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿ, ಅಣ್ಣಾಸಾಹೇಬ ಜೊಲ್ಲೆ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿತು. ಇದರ ಬೆನ್ನಲ್ಲೇ ಕತ್ತಿ ಕ್ಷೇತ್ರದಲ್ಲಿ ಪ್ರಚಾರದಿಂದ ದೂರ ಉಳಿದಿದ್ದಾರೆಂದು ಹೇಳಲಾಗುತ್ತಿದೆ.ಪ್ರಭಾಕರ ಕೋರೆ ಅವರು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಳ್ಳದಿರುವುದು ಮತ್ತು ಅವರ ಪುತ್ರ ಅಮಿತ್ ಕೋರೆ ಅವರಿಗೆ ಚಿಕ್ಕೋಡಿ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿದ್ದಾರೆನ್ನಲಾಗಿದೆ.

ರಮೇಶ್ ಜಾರಕಿಹೊಳಿ ಅವರು ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಕ್ಕಿಂತ ಹೆಚ್ಚಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಸೋಲಿಸಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದು ಹೇಳಲಾಗುತ್ತಿದೆ. ಇದಲ್ಲದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ಕಿರಿಯ ಸಹೋದರ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಕಣಕ್ಕಿಳಿದಿರುವುದು. ತಮ್ಮ ಸ್ವಂತ ಮಗಳ ವಿರುದ್ಧ ಹೋಗಬೇಕಾಗಿರುವುದರಿಂದ ಪ್ರಚಾರದಿಂದ ದೂರ ಉಳಿದಿದ್ದಾರೆಂದು ಹೇಳಲಾಗುತ್ತಿದೆ.