This is the title of the web page
This is the title of the web page

ನರೇಂದ್ರ ಮೋದಿ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ಈ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು.ಇಂದಾದರೂ ಸತ್ಯ ಮಾತನಾಡಿ,: ಸಿಎಂ ಸಿದ್ದರಾಮಯ್ಯ ಟಾಂಗ್

ನರೇಂದ್ರ ಮೋದಿ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ಈ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು.ಇಂದಾದರೂ ಸತ್ಯ ಮಾತನಾಡಿ,:  ಸಿಎಂ ಸಿದ್ದರಾಮಯ್ಯ ಟಾಂಗ್

 

ಬೆಂಗಳೂರು,ಏ,29,:ನರೇಂದ್ರ ಮೋದಿ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ಈ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು.ಇಂದಾದರೂ ಸತ್ಯ ಮಾತನಾಡಿ,:ಸಿಎಂ ಸಿದ್ದರಾಮಯ್ಯ ಟಾಂಗ್  ಮೋದಿಯವರೇ, ಇಂದಿನ ನಿಮ್ಮ ಭಾಷಣ ಈ ಚುನಾವಣಾ ಪ್ರಚಾರದ ಕೊನೆಯ ಭಾಷಣವಾಗಿರಬಹುದು. ಇಂದಾದರೂ ಸತ್ಯ ಮಾತನಾಡಿ, ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ರಾಜಕೀಯ ಲಾಭ ಪಡೆಯುವ ದುಷ್ಟತನವನ್ನು ಕೈಬಿಟ್ಟು ನಿಮ್ಮ ಹತ್ತು ವರ್ಷಗಳ ಸಾಧನೆಯ ಬಗ್ಗೆ ಮಾತನಾಡಿ,

ನೀವು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡಿರುವ ಅನ್ಯಾಯ ಮತ್ತು ನಿಮ್ಮ ನಡೆ-ನುಡಿಗಳಲ್ಲಿನ ಹಿಪಾಕ್ರಸಿ ಬಗ್ಗೆ ನಾನು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಪ್ರಧಾನಿ ಮೋದಿ ವಿರುದ್ದ ಗುಡುಗಿರುವ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿಯವರೇ, ಮಾತು ಮಾತಿಗೆ ಕರ್ನಾಟಕಕ್ಕೆ ಯುಪಿಎ ಸರ್ಕಾರ ಕೊಟ್ಟಿದ್ದು ಕಡಿಮೆ, ಎನ್ ಡಿ ಎ ಸರ್ಕಾರ ಎಷ್ಟೊಂದು ಕೊಟ್ಟಿದೆ ಎಂದು ಲೆಕ್ಕ ಹೇಳುತ್ತಿರಲ್ಲಾ? ನಮ್ಮ ಲೆಕ್ಕವನ್ನೂ ಕೇಳಿ. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ರೂ. 24,42,213 ಕೋಟಿ, ಕರ್ನಾಟಕಕ್ಕೆ ನೀಡಿದ್ದ ತೆರಿಗೆ ಪಾಲು ರೂ.35,895 ಕೋಟಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ ಪಾಲು ರೂ. 16,082 ಕೋಟಿ. ಹೀಗೆ ಒಟ್ಟು ರೂ.46,288 ಕೋಟಿ ರಾಜ್ಯಕ್ಕೆ ಬಂದಿತ್ತು.2023-24ನೇ ಸಾಲಿನ ಕೇಂದ್ರ ಬಜೆಟ್ ಗಾತ್ರ ರೂ.45,03,097 ಕೋಟಿ. ಆದರೆ ನಿಮ್ಮ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆ. ಕರ್ನಾಟಕಕ್ಕೆ ನೀಡುವ ಹಣವೂ ದುಪ್ಪಟ್ಟಾಗಬೇಕಿತ್ತು ಅಲ್ಲವೇ? ಅಂದರೆ ಕನಿಷ್ಠ ಒಂದು ಲಕ್ಷ ಕೋಟಿಯನ್ನಾದರೂ ನೀವು ನೀಡಬೇಕಾಗಿತ್ತಲ್ಲವೇ? ಈ ಲೆಕ್ಕ ಸುಳ್ಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.