“ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸೇವಕ” ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಆಕ್ರೋಶ

“ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸೇವಕ” ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಆಕ್ರೋಶ

 

ಚಿತ್ರದುರ್ಗ,  19:  ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಸೇವಕನಾಗಿರುವ ಕರ್ನಾಟಕ ರಾಜ್ಯಪಾಲರಾದ ಥಾವೋರ್ ಚಂದ್ ಗೆಹ್ಲೋಟ್‌ಗೆ ಧಿಕ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ಅದರಂತೆಯೇ ಇತ್ತ ಕೋಟೆನಾಡು ಚಿತ್ರದುರ್ಗದಲ್ಲೂ ಸಚಿವರು, ಶಾಸಕರು, ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಬಿಜಿ ಗೋವಿಂದಪ್ಪ, ಎಸ್‌.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಮಾಜಿ ಸಚಿವ ಹೆಚ್ ಆಂಜನೇಯ, ಮಾಜಿ ಸಂಸದ ಬಿಎನ್ ಚಂದ್ರಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.