This is the title of the web page
This is the title of the web page

ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸೇರಿ ಹಲವರ ವಿರುದ್ಧ FIR

ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸೇರಿ ಹಲವರ ವಿರುದ್ಧ FIR

 

ಬೆಂಗಳೂರು: ಚುನಾವಣಾ ಬಾಂಡ್‌ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಎ1 ಆರೋಪಿ: ಒಟ್ಟು ಐವರ ಮೇಲೆ ಎಫ್‌ಐಆರ್ ದಾಖಲಾಗಿದ್ದು, ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್‌ ಕುಮಾರ್‌ ಕಟೀಲ್‌ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.

ಇವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ನಿರ್ಮಲಾ ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.

ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿತ್ತು.

ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಸುಲಿಗೆ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದ್ದು, ಅದಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ನಿನ್ನೆ ಒತ್ತಾಯಿಸಿದ್ದರು.