ನವದೆಹಲಿ:ನಾವು ‘ಭಾರತ್ ಜೋಡೋ ಯಾತ್ರೆ’ ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ .ನಮಗೆ ವಿದ್ಯುನ್ಮಾನ ಮತಯಂತ್ರಗಳ (EVM) ಮೇಲೆ ನಂಬಿಕೆ ಇಲ್ಲ. ಹೀಗಾಗಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಪಕ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು ‘ಭಾರತ್ ಜೋಡೋ ಯಾತ್ರೆ’ ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.
ಮತಯಂತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಸಾಂಪ್ರದಾಯಿಕ ವಿಧಾನಕ್ಕೆ ಮರಳುವಂತೆ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಕಟುವಾಗಿ ಟೀಕಿಸಿದ್ದಾರೆ.
ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಾಗ (ಕರ್ನಾಟಕ, ಜಮ್ಮು-ಕಾಶ್ಮೀರ, ತೆಲಂಗಾಣ, ವಯನಾಡು, ಹಿಮಾಚಲ ಪ್ರದೇಶ, ಜಾರ್ಖಂಡ್‌ನಲ್ಲಿ) ಖರ್ಗೆ ಅವರಿಗೆ ಚುನಾವಣಾ ಆಯೋಗ ಮತ್ತು ಇವಿಎಂಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ.