This is the title of the web page
This is the title of the web page

ಸ್ಪೀಕರ್ ಕಚೇರಿಗೆ ನುಗ್ಗಿ ಬಿಜೆಪಿ ಶಾಸಕರು ಗಲಾಟೆ

 

ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣ ಬೆಳಗಾವಿ ಅಧಿವೇಶನದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದು, ಇತ್ತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಸದಸ್ಯರು ನೇರವಾಗಿ ಸ್ಪೀಕರ್ ಕಚೇರಿಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ವರದಿಯಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ವಿಧಾನಪರಿಷತ್​ ನಲ್ಲಿ ಈ ಸಂಬಂಧ ಸದನಲ್ಲಿ ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಹಿನ್ನಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಸದನವನ್ನು ಕೊಂಚ ಸಮಯ ಮುಂದೂಡಿದರು.

ಮೂಲಗಳ ಪ್ರಕಾರ ಶಾಸಕ ಸುನೀಲ್ ಕುಮಾರ್, ವಿಪಕ್ಷ ನಾಯಕ ಅಶೋಕ್, ವಿಜಯೇಂದ್ರ, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಬಿಜೆಪಿ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಖಾದರ್ ಅವರ ಜೊತೆ ವಾಗ್ದಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಶಾಸಕರು ಸ್ಪೀಕರ್ ಜೊತೆ ಜಗಳದ ವಿಷಯ ತಿಳಿಯುತ್ತಿದ್ದಂತೆಯೇ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸ್ಥಳಕ್ಕೆ ದೌಡಾಯಿಸಿ ಸ್ಪೀಕರ್ ಯುಟಿ ಖಾದರ್ ಬೆಂಬಲಕ್ಕೆ ನಿಂತರು. ಹೀಗಾಗಿ ಎರಡೂ ಕಡೆಯಿಂದ ವಾಗ್ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಸ್ಪೀಕರ್ ಕಚೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು.

ಆದರೆ ಏಕಾಏಕಿ ಸಿಸಿ ಪಾಟೀಲ್ ಬದಲಿಗೆ ಕೃಷ್ಣ ಭೈರೆಗೌಡರಿಗೆ ಅವಕಾಶ ನೀಡಲಾಯಿತು. ಈ ನಡುವೆ ವಿಜಯಾನಂದ್ ಕಾಶಪ್ಪನವರ್ ಸಹ ಮಾತನಾಡಿ, RSS ಪ್ರೇರಿತ ಕಲ್ಲುತೂರಾಟ ಎಂದು ಜರಿದರು. ಶೇ.4 ರಷ್ಟು ಇದ್ದ ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಿಗೆ ಸಮಾನವಾಗಿ ಮರುಹಂಚಿಕೆ ಮಾಡುವ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸ್ವತಃ ಪಂಚಮಸಾಲಿ ಲಿಂಗಾಯತ ಸಮುದಾಯದ ಮುಖಂಡರೂ ಕೂಡ ಆಗಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಟೀಕಿಸಿದಾಗ ವ್ಯಾಪಕ ಸಂಘರ್ಷ ನಡೆಯಿತು.

ಅಲ್ಲದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಮೀಸಲಾತಿ ಬದಲಾವಣೆಯನ್ನು ಜಾರಿಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡುವ ಮೂಲಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಚುನಾವಣೆ ಸಲುವಾಗಿ, ಅವರು ಮೀಸಲಾತಿಯನ್ನು ಘೋಷಿಸಿದರು, ಆದರೆ ನಂತರ ಅವರು ಅದನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಹೇಳಿದರು.

ಜಯಮೃತ್ಯುಂಜಯ ಶ್ರೀ ಆರೋಪ ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕರು, ಕಾಶಪ್ಪನವರ್​​ ಹೇಳಿಕೆಯನ್ನು ಖಂಡಿಸಿ ಗಲಾಟೆ ಆರಭಿಸಿದರು. ಕೆಲ ನಾಯಕರು ಏರು ಧ್ವನಿಯಲ್ಲೇ ಕೂಗಾಡಿದರು. ಎರಡೂ ಕಡೆಯಿಂದ ಗಲಾಟೆ ಹೆಚ್ಚಾದ ಹಿನ್ನಲೆಯಲ್ಲಿ ಸ್ಪೀಕರ್​ ಸದನವನ್ನು ಕೊಂಚ ಸಮಯ ಮುಂದೂಡಿದರು.

ಈ ಹಿನ್ನೆಲೆಯಲ್ಲಿ ಮತ್ತಷ್ಟು ಆಕ್ರೋಶಗೊಂಡ ಬಿಜೆಪಿ ಸದಸ್ಯರು ನೇರವಾಗಿ ಸ್ಪೀಕರ್ ಕಚೇರಿಗೆ ತೆರಳಿ ಯುಟಿ ಖಾದರ್​ ಜೊತೆ ಜಗಳಕ್ಕೆ ಬಿದ್ದಿದ್ದರು. ಲಾಠಿ ಚಾರ್ಜ್‌ ಬಗ್ಗೆ ಚರ್ಚೆಗೆ ಅವಕಾಶ ಕೊಟ್ಟಿಲ್ಲವೆಂದು ಸ್ಪೀಕರ್ ಜತೆ ವಾಗ್ವಾದಕ್ಕೀಳಿದರು.