ನಾನು ನಿಜವಾದ ವಿರೋಧ ಪಕ್ಷದ ನಾಯಕ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ನಾನು ನಿಜವಾದ ವಿರೋಧ ಪಕ್ಷದ ನಾಯಕ :  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ನಾನು ನಿಜವಾದ ವಿರೋಧ ಪಕ್ಷದ ನಾಯಕ, ನನಗೆ ವಿಧಾನಸಭೆಯಲ್ಲಿ ಉಪ ಸಭಾಪತಿಯ ಪಕ್ಕದಲ್ಲಿನ ಕುಚೆ೯ ನೀಡಿ ಎಂದು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ತಮಗೆ ಮತ್ತು ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟಿರುವ ಇತರ ಇಬ್ಬರು ಶಾಸಕರಿಗೆ ಅವರ ಹಿರಿತನವನ್ನು ಪರಿಗಣಿಸಿ ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡುವಂತೆ ಯತ್ನಾಳ್ ಸಭಾಪತಿಗೆ ಮನವಿ ಮಾಡಿದರು.

ಈ ಆರಂಭದಲ್ಲಿ ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟ ನಂತರ ಯತ್ನಾಳ್, ಎಸ್ ಟಿ ಸೋಮಶೇಖರ್ ಮತ್ತು ಎ ಶಿವರಾಮ್ ಹೆಬ್ಬಾರ್ ಅವರನ್ನು ಹಿಂದಿನ ಬೆಂಚ್‌ಗಳಿಗೆ ರ‍್ಗಾಯಿಸಲಾಗಿದೆ. ಹಿರಿಯ ಶಾಸಕರನ್ನು ಹಿಂದಿನ ಬೆಂಚುಗಳಲ್ಲಿ ಕೂರಿಸುವ ಮೂಲಕ ಅವಮಾನಿಸಲಾಗಿದೆ. ಹಿಂದಿನ ಅಧಿವೇಶನದಲ್ಲೂ ಹೀಗೆ ಮಾಡಲಾಗಿತ್ತು.

ನಾವು ಐದರಿಂದ ಆರು ಬಾರಿ ಆಯ್ಕೆಯಾಗಿದ್ದೇವೆ, ನಮ್ಮನ್ನು ಮುಂದಿನ ಸಾಲಿನಲ್ಲಿ ಕೂರಿಸಲು ವ್ಯವಸ್ಥೆ ಮಾಡಬೇಕು ಎಂದು ಯತ್ನಾಳ್ ಹೇಳಿದರು. ಆಸನ ವ್ಯವಸ್ಥೆಯನ್ನು ಮರುಪರಿಶೀಲಿಸುವಂತೆ ಸ್ಪೀಕರ್ ಗೆ ಮನವಿ ಮಾಡಿದ ಅವರು, ನಾಳೆಯೊಳಗೆ ಈ ವಿಷಯದಲ್ಲಿ ಸಕಾರಾತ್ಮಕ ನರ‍್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.