ಡಾ|| ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳ ನಿರಾಕರಣೆ ಸಂಪುಟ ನಿರ್ಣಯ ಕೇಂದ್ರಕ್ಕೆ ಸಲ್ಲಿಕೆ: ಸಚಿವ ಈಶ್ವರ್ ಖಂಡ್ರೆ

ಡಾ|| ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳ ನಿರಾಕರಣೆ ಸಂಪುಟ ನಿರ್ಣಯ ಕೇಂದ್ರಕ್ಕೆ ಸಲ್ಲಿಕೆ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ ಡಿ.16 : ಡಾ|| ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳನ್ನು ನಿರಾಕರಿಸುವ ಹಾಗೂ ಸದರಿ ವರದಿಯನ್ನು ಆಧರಿಸಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸಚಿವರ ಸಂಪುಟದ ನಿರ್ಣಯವನ್ನು ಅನುಸರಿಸಿ, ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಐವನ್ ಡಿಸೋಜ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಡಾ|| ಕಸ್ತೂರಿ ರಂಗನ್ ವರದಿಯು ಈವರೆವಿಗೂ ಜಾರಿಯಾಗದೇ ಇರುವುದರಿಂದ ಮಲೆನಾಡು ಕರಾವಳಿ ಭಾಗದ ಜನರಿಗೆ ಯಾವುದೇ ತೊಂದರೆ ಇಲ್ಲ ಎಂದರು.

ಡಾ|| ಕಸ್ತೂರಿ ರಂಗನ್ ಸಮಿತಿಯ ವರದಿಯನ್ನಾಧರಿಸಿ,ಕೇಂದ್ರ ಸರ್ಕಾರವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸರ್ಕಾರದ ಸ್ಪಷ್ಟ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಸಂವಹನಿಸಲಾಗಿರುತ್ತದೆ ಎಂದು ತಿಳಿಸಿದರು