This is the title of the web page
This is the title of the web page

ಪತಿಯೊಂದಿಗೆ ಹೋಗುವಾಗ ರಿಕ್ಷಾ ಡಿಕ್ಕಿ: ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು

ಪತಿಯೊಂದಿಗೆ ಹೋಗುವಾಗ ರಿಕ್ಷಾ ಡಿಕ್ಕಿ: ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು

ಅಂಕೋಲಾ: ತನ್ನ ಗಂಡನೊಂದಿಗೆ ನಡೆದುಕೊಂಡು ಹೋಗುವಾಗ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾವಿಕೇರಿಯಲ್ಲಿ ನಡೆದಿದೆ.

ಶೋಭಾ ಗೋಪಾಲ ನಾಯಕ (28) ಮೃತ ಮಹಿಳೆ, ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆಸಿದ್ದಾನೆ.

ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಪಟ್ಟಣದಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ರಿಕ್ಷಾ ಚಾಲಕ ಇವನಾಗಿದ್ದು, ಘಟನೆ ಬಳಿಕ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.