This is the title of the web page
This is the title of the web page

ವಿಧಾನಸಭೆ ಬಜೆಟ್ ಅಧಿವೇಶನ ವಿಧಾನಸೌಧ ಸುತ್ತಮುತ್ತಲೂ ಜುಲೈ 3ರಿಂದ ನಿಷೇಧಾಜ್ಞೆ ಜಾರಿ

ವಿಧಾನಸಭೆ ಬಜೆಟ್ ಅಧಿವೇಶನ ವಿಧಾನಸೌಧ ಸುತ್ತಮುತ್ತಲೂ ಜುಲೈ 3ರಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು, ಜು2,:ಜುಲೈ 7ರಂದು ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.ವಿಧಾನಸೌಧ ಸುತ್ತಮುತ್ತಲೂ ಜುಲೈ 3ರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕರ್ನಾಟಕದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತ ಈ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಯನ್ನು ಸಹ ನಡೆಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 3 ರಿಂದ 14ರ ತನಕ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯ ತನಕ ವಿಧಾನಸೌಧ ಸುತ್ತಮುತ್ತಲಿನ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಜುಲೈ 3ರ ಸೋಮವಾರ ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.