ಬೆಂಗಳೂರು: ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲತಾ ಮಲ್ಲಿಕಾರ್ಜುನ್ ಬಂಡಾಯವೆದ್ದು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿನ ಹಾಲಿ ಶಾಸಕರಾಗಿದ್ದ ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ದಾಖಲಿಸಿದ್ದರು.