ನವದೆಹಲಿ : ಮಾ.25 ರಂದು ಹೋಳಿ ಹಬ್ಬ ಇದ್ದು ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಮಾ.26 ರಂದು ಪ್ರಧಾನ ಮಂತ್ರಿ ನಿವಾಸಕ್ಕೆ ಘೇರಾವ್ ಹಾಕಲಿದ್ದೇವೆ ಎಂದು ರೈ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಮಾ.26 ರಂದು ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಆಮ್ ಆದ್ಮಿ ಪಕ್ಷದ ಸಂಚಾಲಕ ಗೋಪಾಲ್ ರೈ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಗೋಪಾಲ್ ರೈ, ಶಾಸಕರು ಹಾಗೂ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಗಳಿಗೆ ಕೇಜ್ರಿವಾಲ್ ಕುಟುಂಬದವರನ್ನು ಭೇಟಿ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಎಎಪಿಯ ಎಲ್ಲಾ ಶಾಸಕರು, ಕೌನ್ಸಿಲರ್‌ಗಳು, ಪದಾಧಿಕಾರಿಗಳು, ಇಂಡಿಯಾ ಮೈತ್ರಿಕೂಟದ ಪ್ರತಿನಿಧಿಗಳು ಪ್ರಜಾಪ್ರಭುತ್ವವನ್ನು ಉಳಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಿದ್ದಾರೆ. ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನವಾದ ಶನಿವಾರದಂದು ನಾವು ಶಹೀದಿ ಪಾರ್ಕ್‌ನಲ್ಲಿ ಸೇರುತ್ತೇವೆ ಎಂದು ದೆಹಲಿ ಸಚಿವರು ಹೇಳಿದರು.
ಇ.ಡಿ ಯಿಂದ ಬಂಧನ: ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮಾ.24 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿಗಳನ್ನು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ದಹಿಸಲಾಗುತ್ತದೆ.