ಮತಬೇಟೆಗೆ ಇಳಿದ ನಟಿ ರಮ್ಯಾ: ಎಂ.ಬಿ.ಪಾಟೀಲ್ , ಕೆ.ಜೆ.ಜಾರ್ಜ್, ಸಿದ್ದರಾಮಯ್ಯ ಪರ ಪ್ರಚಾರ

ಮತಬೇಟೆಗೆ ಇಳಿದ ನಟಿ ರಮ್ಯಾ: ಎಂ.ಬಿ.ಪಾಟೀಲ್ , ಕೆ.ಜೆ.ಜಾರ್ಜ್, ಸಿದ್ದರಾಮಯ್ಯ ಪರ ಪ್ರಚಾರ

 

ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದೆ, ನಟಿ ರಮ್ಯಾ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಭಾವಿ ನಾಯಕರ ಪರವಾಗಿ ಭರ್ಜರಿ ಮತಬೇಟೆಗೆ ಇಳಿದಿದ್ದು, ಚುನಾವಣಾ ಕಾವು ಮತ್ತಷ್ಟೂ ರಂಗೇರಿದೆ.

ಚುನಾವಣೆ ಸಂದರ್ಭದಲ್ಲಿ ಜನರ ಮತಗಳನ್ನು ತನ್ನತ್ತ ಸೆಳೆಯುವ ಸಲುವಾಗಿ ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೂಲಕ ಮತಯಾಚನೆ ಮಾಡಿಸುತ್ತಾರೆ. ಅದರಂತೆ ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಲಿದ್ದಾರೆ.

ಮೇ 6ರಂದು ಬಬಲೇಶ್ವರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಕೆ.ಜೆ.ಜಾರ್ಜ್ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲೆಯಲ್ಲೂ ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ.