This is the title of the web page
This is the title of the web page

ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ನಡುವೆ ವಾಗ್ವಾದ  ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ

ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ನಡುವೆ ವಾಗ್ವಾದ  ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ
ಮೂಡಲಗಿ : ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ನಡುವೆ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ರಾಮಪ್ಪ ಬಸವಂತಪ್ಪ ಕೌಜಲಗಿ(25) ಮೃತ ವ್ಯಕ್ತಿ, ಸಿದ್ದಪ್ಪ ಮಲ್ಲಪ್ಪ ಕೌಜಲಗಿ(24) ಕೊಲೆ ಮಾಡಿದ ಆರೋಪಿ ಇವರಿಬ್ಬರು ಸಂಬಂಧಿಕರು. ಸೋಮವಾರದಂದು ಗದ್ದೆಯಲ್ಲಿ ಇಬ್ಬರು ನೀರು ಹಾಯಿಸುತ್ತಿದ್ದು, ನೀರಿಗಾಗಿ ರಾಮಪ್ಪ ಹಾಗೂ ಅವನ ತಂದೆ ಬಸವಂತಪ್ಪ ಹಾಗೂ ಸಿದ್ದಪ್ಪನ ನಡುವೆ ಜಗಳವಾಗಿ ಅದು ವಿಕೋಪಕ್ಕೆ ತಿರುಗಿ ಸಿದ್ದಪ್ಪ ತನ್ನ ಕೈಯಲ್ಲಿದ್ದ ಕುಡುಗೋಲಿನಿಂದ ರಾಮಪ್ಪನನ್ನು ಕೊಚ್ಚಿ ಕೊಲೆ ಮಾಡಿದ್ದು, ಅದನ್ನು ತಡೆಯಲು ಹೋದ ರಾಮಪ್ಪನ ತಂದೆ ಬಸವಂತಪ್ಪನ ಮೇಲೇಯೂ ಹಲ್ಲೆ ಮಾಡಿರುವ ಬಗ್ಗೆ ಸಿದ್ದಪ್ಪ ಪೊಲೀಸ್ ಅಧಿಕಾರಿಗಳ ಮುಂದೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಗಂಭೀರ ಗಾಯವಾದ ಬಸವಂತಪ್ಪನನ್ನು ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
 ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ      ಅಡಿಷನಲ್   ಎಸ್ ಪಿ ಶೃತಿ. ಎನ್.ಎಸ್,     ಡಿವೈಎಸ್ಪಿ ದೂದಪೀರ್ ಮುಲ್ಲಾ, ಸಿಪಿಐ ಶ್ರೀಶೈಲ್ ಬ್ಯಾಕೋಡ, ಪಿಎಸ್ಐ ರಾಜು ಪೊಜೇರಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.