ಕೋಲಾರ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಈಗಾಗಲೇ ಘೋಷಣೆ ಮಾಡಿದ ಈ ನಾಲ್ಕು ಗ್ಯಾರಂಟಿ ಯೋಜನೆಗಳನ್ನ ಕಾಂಗ್ರೆಸ್ ಸರ್ಕಾರದ ಮೊದಲ ಕ್ಯಾಬಿನೆಟ್ ನಲ್ಲೇ ಅನುಷ್ಟಾನ ಮಾಡುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.
ಕೋಲಾರದಲ್ಲಿ ನಡೆದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ ಘೋಷಣೆ ಮಾಡಿದ್ದೇವೆ. ಮಾಡಿದ ಈ ನಾಲ್ಕು ಗ್ಯಾರಂಟಿ ಯೋಜನೆಗಳನ್ನ ಕಾಂಗ್ರೆಸ್ ಸರ್ಕಾರದ ಮೊದಲ ಕ್ಯಾಬಿನೆಟ್ ನಲ್ಲೇ ಅನುಷ್ಟಾನ ಮಾಡುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡುತ್ತಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಯ ಯಜಮಾನಿಗೆ 2000 ರೂ, 200 ಯೂನಿಟ್ ಉಚಿತ ವಿದ್ಯುತ್ , 10 ಕೆಜಿ ಉಚಿತ ಅಕ್ಕಿ, ಡಿಪ್ಲೋಮಾ ಪದವಿಧರರಿಗೆ 1500 ರೂ, ಪದವೀಧರರಿಗೆ 3000 ನಿರುದ್ಯೋಗ ಭತ್ಯೆ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದರು.ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ರಾಹುಲ್ ಗಾಂಧಿ ಹೇಳಿದರು. ನಾವು ಅಧಿಕಾರಕ್ಕೆ ನೀಡಿರುವ ಎಲ್ಲಾ ಭರವಸೆಗಳನ್ನ ಈಡೇರಿಸುತ್ತೇವೆ. ಯುವಕರಿಗೆ 3 ಸಾವಿರ ಹಣ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ಹಣ ನೀಡುತ್ತೇವೆ ಎಂದರು. ರಾಜ್ಯದಲ್ಲಿ ಬರೀ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ. ಏನೇ ಕೆಲಸ ಮಾಡಿದರೂ ಲಂಚ ಕೊಡಬೇಕು ಎಂದು ರಾಹುಲ್ ಗಾಂಧಿ ಗುಡುಗಿದರು. ಶಿಕ್ಷಕರು, ಪೊಲೀಸರ ನೇಮಕಾತಿಯಲ್ಲಿ ಬರೀ ಭ್ರಷ್ಟಾಚಾರವೇ ತುಂಬಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಭರವಸೆಗಳನ್ನ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.