ಬೆಳಗಾವಿ : ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ ಅವರ ಸರಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ ಅವರು ಇಂಡಿಯನ್ ಡಿಫೆನ್ಸ್ ಎಸ್ಟೇಟ್ ಸರ್ವಿಸ್‌ನ ತಮಿಳುನಾಡು ಮೂಲದವರಾಗಿದ್ದಾರ ಇಂದು ಬೆಳಗ್ಗೆ ಪೊಲೀಸರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬಾಗಿಲು ತೆಗೆದು ಒಳ ನುಗ್ಗಿದಾಗ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡೂ ದಿನಗಳ ಹಿಂದೆ ದಂಡುಮಂಡಳಿಯ ಕಚೇರಿಯಲ್ಲಿ ಸಿಬಿಐ ದಾಳಿಯಾಗಿತ್ತು.