This is the title of the web page
This is the title of the web page

ಮೈಸೂರು ಭಾಗದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ: ಮೋದಿ ಸಮಾವೇಶಕ್ಕೆ  ನಾನು ಹೋಗಲ್ಲ: ಸಿಎಂ ಭೇಟಿ ಬಳಿಕ ಶ್ರೀನಿವಾಸ್ ಪ್ರಸಾದ್ ಹೇಳಿಕೆ

ಮೈಸೂರು ಭಾಗದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ: ಮೋದಿ ಸಮಾವೇಶಕ್ಕೆ  ನಾನು ಹೋಗಲ್ಲ: ಸಿಎಂ ಭೇಟಿ ಬಳಿಕ ಶ್ರೀನಿವಾಸ್ ಪ್ರಸಾದ್ ಹೇಳಿಕೆ

 

 

ಮೈಸೂರು: ಮೈಸೂರಿನಲ್ಲಿರುವ ಜಯಲಕ್ಷ್ಮಿಪುರಂ ನಲ್ಲಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಶನಿವಾರ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಮೈಸೂರಿನಲ್ಲಿರುವ ಜಯಲಕ್ಷ್ಮಿಪುರಂ ನಲ್ಲಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ, ಮುನಿಸು ಮರೆತು ಪ್ರಸಾದ್ ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ. ಉಭಯ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಈ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌. ಲಕ್ಷ್ಮಣ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್ ಅವರನ್ನು ಬೆಂಬಲಿಸುವಂತೆ ಕೋರಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಹಾಗೂ ಪ್ರಸಾದ್ ದೀರ್ಘಕಾಲದಿಂದ ಸ್ನೇಹಿತರು. ಜೊತೆಯಲ್ಲೇ ರಾಜಕಾರಣ ಮಾಡಿದವರು. ರಾಜಕೀಯವಾಗಿ ನಾನು ಕಾಂಗ್ರೆಸ್‌ನಲ್ಲಿದ್ದೆ, ಅವರು ಬಿಜೆಪಿಗೆ ಹೋಗಿದ್ದರು. ಅವರೀಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಲು ಹಾಗೂ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದೆ ಎಂದು ತಿಳಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಶ್ರೀನಿವಾಸ ಪ್ರಸಾದ್, ನಾಳೆ (ಏ.14) ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ, ಬರುವುದೂ‌ ಇಲ್ಲ. ಕರೆದಿಲ್ಲ, ಕರೆಯುವುದೂ ಇಲ್ಲ. ನಾನು ಹೋಗುವುದೂ ಇಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಜೊತೆ ರಾಜಕೀಯದ ಚರ್ಚೆ ನಡೆದಿಲ್ಲ. ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದ್ದೆ. ಅವರು ನನ್ನ ಬೆಂಬಲ ಕೇಳಿದ್ದಾರೆ. ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ ಎಂದು ಹೇಳಿದರು.

ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ ನಮಗಿದೆ ಎಂದು ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಬಹಿರಂಗ ಹೇಳಿಕೆ ನೀಡಿದ್ದು, ಸಹಜವಾಗಿ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸುನೀಲ್‌ ಬೋಸ್‌, ಶ್ರೀನಿವಾಸ ಪ್ರಸಾದ್‌ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದಾರೆ. ನಮ್ಮ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.