ಬಿಜೆಪಿ ಬಿಗ್  ವಿಕೆಟ್‌ ಪತನ: ಶಿವಮೊಗ್ಗದಿಂದ ಕಣಕ್ಕೆ; ಆಯನೂರು ಮಂಜುನಾಥ್

ಬಿಜೆಪಿ ಬಿಗ್  ವಿಕೆಟ್‌ ಪತನ: ಶಿವಮೊಗ್ಗದಿಂದ ಕಣಕ್ಕೆ; ಆಯನೂರು ಮಂಜುನಾಥ್

 

ಶಿವಮೊಗ್ಗ: ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಯನೂರು ಮಂಜುನಾಥ್, ಸದ್ಯದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲೇಬೇಕು ಎಂಬ ಇಚ್ಛೆ ಹೊಂದಿದ್ದೇನೆ. ಈಗಾಗಲೇ ನನ್ನ ನಿಲುವು, ಭಾವನೆ ಪ್ರಕಟ ಮಾಡಿದ್ದೇನೆ. ಪಕ್ಷದ ವೇದಿಕೆಯಲ್ಲೂ ನನ್ನ ವಿನಂತಿ ಸಲ್ಲಿಸಿದ್ದೇನೆ. ನನ್ನ ಆಸೆಗೆ ಪೂರಕವಾಗಿ ಬಿಜೆಪಿಯಿಂದ ಟಿಕೆಟ್ ಸಿಗುವ ಲಕ್ಷಣ ಕಂಡುಬಂದಿಲ್ಲ ಎಂದರು.