This is the title of the web page
This is the title of the web page

ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ನೀತಿ ಸಂಹಿತೆ ಉಲ್ಲಂಘನೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು

ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ನೀತಿ ಸಂಹಿತೆ ಉಲ್ಲಂಘನೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು

 

ಬೆಳಗಾವ: ಚುನಾವಣೆಯಲ್ಲಿ ಎಲ್ಲ‌ ಅಭ್ಯರ್ಥಿಗಳು ನೀತಿ ಸಂಹಿತೆ ಪಾಲನೆ ಮಾಡಿ ಪ್ರಚಾರ ಮಾಡಬೇಕು. ಆದರೆ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ ಎಂದು ಬೆಳಗಾವಿ ಆಪ್ ಜಿಲ್ಲಾಧ್ಯಕ್ಷ ಶಂಕರ ಹೆಗಡೆ ಒತ್ತಾಯಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆಯಾದ ಮೇಲೆ ಎಲ್ಲ‌ ಪಕ್ಷದ ಅಭ್ಯರ್ಥಿಗಳು ನೀತಿ ಸಂಹಿತೆ ಪಾಲನೆ ಮಾಡಿಕೊಂಡು ಪ್ರಚಾರ ಮಾಡಬೇಕು. ಆದರೆ ಬಿಜೆಪಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಬಸವೇಶ್ವರ ಜಯಂತಿ, ಜೈನ ಬಸ್ತಿ ಸೇರಿದಂತೆ ಸುಮಾರು ಕಡೆಗಳಲ್ಲಿ ಪಕ್ಷದ ಶಾಲು ಹಾಕಿಕೊಂಡು ಪ್ರಚಾರ ನಡೆಸಿದ್ದಾರೆ. ಎಲ್ಲ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.

ಬೆಳಗಾವಿ ಉತ್ತರ ಮತಕ್ಷೇತ್ರದ ಆಪ್ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಮಾತನಾಡಿ, ಜಿಲ್ಲಾ ಚುನಾವಣಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯ ವೀಕ್ಷಕರು ಏನು ಮಾಡುತ್ತಿದ್ದಾರೆ. ಉಷಾತಾಯಿ ದೇವಸ್ಥಾನದಲ್ಲಿ ಬಿಜೆಪಿ‌‌ ಚಿಹ್ನೆ ಇರುವ ಶಾಲು ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೆ, ಸದಾಶಿವ ನಗರದ ದೇವಸ್ಥಾನದ ಒಂದರಲ್ಲಿ ಪ್ರಚಾರ ಮಾಡಿದ್ದಾರೆ. ಒಟ್ಟು 35ಕ್ಕೂ ಹೆಚ್ಚು ಕಡೆಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯನ್ನು ಬೆಳಗಾವಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಮಾಡಿದ್ದಾರೆ. ಅವರ ಮೇಲೆ‌ ಕೇವಲ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬಿಟ್ಟರೆ ಬೇರೆ ಕಡೆಯಾಗಿಲ್ಲ. ಈ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಅದರ ಮೇಲೆ ಕ್ರಮವಾಗದಿದ್ದರೇ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸಿ ಹೈಕೋರ್ಟ್ ಮೋರೆ ಹೋಗಲಾಗುವುದು ಎಂದರು.

ಈ ಸಂದರ್ಭದಲ್ಲಿ ರವೀಂದ್ರ ಬೆಲ್ಲದ ಉಪಸ್ಥಿತರಿದ್ದರು.