This is the title of the web page
This is the title of the web page

ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಸರ್ವಾಧಿಕಾರಿ, ಬಿಜೆಪಿಗೆ ಇಂಡಿಯಾ  ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತೆ: ಕೇಜ್ರಿವಾಲ್ ಬಂಧನ ಹಿನ್ನೆಲೆ ಬಿಜೆಪಿ ವಿರುದ್ಧ ಕೆಂಡ ಕಾರಿದ ಇಂಡಿಯಾ ಮೈತ್ರಿಕೂಟ!

ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಸರ್ವಾಧಿಕಾರಿ, ಬಿಜೆಪಿಗೆ ಇಂಡಿಯಾ  ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತೆ: ಕೇಜ್ರಿವಾಲ್ ಬಂಧನ ಹಿನ್ನೆಲೆ ಬಿಜೆಪಿ ವಿರುದ್ಧ ಕೆಂಡ ಕಾರಿದ ಇಂಡಿಯಾ ಮೈತ್ರಿಕೂಟ!

 

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿರುವುದಕ್ಕೆ ಇಂಡಿಯಾ ಕೂಟದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು INDIA ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳ ಪ್ರತೀಕಾರದ ದುರುಪಯೋಗವನ್ನು ನಾನು ಬಲವಾಗಿ ಖಂಡಿಸುತ್ತೇನೆ, ವಿಶೇಷವಾಗಿ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿರುವಾಗ ಬಿಜೆಪಿ ಎಷ್ಟರ ಮಟ್ಟಿಗೆ ಅಧಿಕಾರಕ್ಕೆ ಬರಬಹುದು ಎಂಬುದನ್ನು ಈ ಬಂಧನ ತೋರಿಸುತ್ತದೆ. ಅರವಿಂದ್ ಕೇಜ್ರಿವಾಲ್ ವಿರುದ್ಧದ ಈ ಅಸಂವಿಧಾನಿಕ ಕ್ರಮದ ವಿರುದ್ಧ ‘INDIA’ ಒಟ್ಟಾಗಿದೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಎಕ್ಸ್-ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಈ ಭಯದಿಂದ ಚುನಾವಣೆ ವೇಳೆಗೆ ಯಾವುದೇ ವಿಧಾನದಿಂದ ವಿರೋಧ ಪಕ್ಷದ ನಾಯಕರನ್ನು ಸಾರ್ವಜನಿಕರಿಂದ ದೂರವಿಡಲು ಬಯಸುತ್ತಿದೆ. ಇದಕ್ಕೆ ಬಂಧನವಷ್ಟೇ ಸಬೂಬು. ಈ ಬಂಧನದ ವಿರುದ್ಧ ಜನರು ಹೊಸ ಕ್ರಾಂತಿಗೆ ನಾಂದಿ ಹಾಡಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪೋಸ್ಟ್ ಮಾಡಿದ್ದಾರೆ.