This is the title of the web page
This is the title of the web page

ಡಾ. ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನ. ದುರ್ಬಲಗೊಳಿಸಲು ಹೊರಟೊರುವ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾಗಿದೆ : ಸಂಸದೆ ಪ್ರಿಯಾಂಕಾ ಗಾಂಧಿ

ಡಾ. ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನ. ದುರ್ಬಲಗೊಳಿಸಲು ಹೊರಟೊರುವ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾಗಿದೆ  : ಸಂಸದೆ ಪ್ರಿಯಾಂಕಾ ಗಾಂಧಿ

 

ಬೆಳಗಾವಿ: ಸಂವಿಧಾನ ಯಾವ ರೀತಿ ನಿಮ್ಮನ್ನು ಸುರಕ್ಷಿತವಾಗಿ ಇಟ್ಟಿದೆಯೋ ಅದೇ ರೀತಿ ಸಂವಿಧಾನವನ್ನು ನೀವು ಸುರಕ್ಷಿತವಾಗಿ ಇಡಲು ಸಂಕಲ್ಪ ಮಾಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ಕರೆ ನೀಡಿದರು.
ಬೆಳಗಾವಿಯಲ್ಲಿ ಮಂಗಳವಾರ (ಜ.21) ನಡೆದ ಜೈ ಬಾಪು, ಜೈ ಭೀಮ ಮತ್ತು ಜೈ ಸಂವಿಧಾನ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ” ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚರಕ ತಿರುಗಿಸುವ ಮೂಲಕ ಚಾಲನೆ ನೀಡಿದರು.

ಸಂವಿಧಾನ ಬದಲಾಯಿಸಿ ನಿಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ದುರ್ಬಲಗೊಳಿಸಲು ಹೊರಟೊರುವ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕು. ಈ ಹೋರಾಟದಿಂದ ನೀವು ಹಿಂದೆ ಸರಿಯಬೇಡಿ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಅನ್ಯ ರಾಜ್ಯಗಳ ಕಾಂಗ್ರೆಸ್ ಸಿಎಂಗಳು, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಗಳು, ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.ಡಿಸಿಎಂ ಅವರು ಇದೇ ಸಂದರ್ಭದಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.