This is the title of the web page
This is the title of the web page

ಅಶ್ಲೀಲ ಪದ ಬಳಕೆ: ಬಿಜೆಪಿ MLC ಸಿಟಿ ರವಿ ಬಂಧನ

ಅಶ್ಲೀಲ ಪದ ಬಳಕೆ: ಬಿಜೆಪಿ MLC ಸಿಟಿ ರವಿ ಬಂಧನ

 

ಬೆಳಗಾವಿ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು, ಪದಚ್ಯುತಿಗೆ ಆಗ್ರಹಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಅವಾಚ್ಯಪದ ಬಳಕೆ ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ