This is the title of the web page
This is the title of the web page

ಬೆಳಗಾವಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಬಿಜೆಪಿ ಬಂಡಾಯ: ಕರ್ನಾಟಕದಲ್ಲಿ ಗುಜರಾತ್ ಮಾಡೆಲ್ ಫೇಲಾಯ್ತಾ..!

ಬೆಳಗಾವಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಬಿಜೆಪಿ ಬಂಡಾಯ: ಕರ್ನಾಟಕದಲ್ಲಿ ಗುಜರಾತ್ ಮಾಡೆಲ್ ಫೇಲಾಯ್ತಾ..!

 

ಬೆಳಗಾವಿ, ಏ 15: ಕರ್ನಾಟಕದಲ್ಲಿ ಗುಜರಾತ್ ಮಾಡಲ್ಲ ನಡೆಯುವುದಿಲ್ಲ ಎಂದು ಅನೇಕ ರಾಜಕೀಯ ವಿಶ್ಲೇಷಕರು ಮತ್ತು ಟಿವಿ ಚಾನೆಲ್ ಗಳು ಸುದ್ದಿ ಪ್ರಸಾರ ಮಾಡಿದ್ದು ಆದರೆ ಬಿಜೆಪಿ ಮೊದಲು ಕೈ ಹಾಕಿದ್ದು ಈಗ ಸುಟ್ಟುಕೊಂಡಂತ ಆಗಿದೆ ಎಂಬ ಪ್ರಶ್ನೆ ಎದ್ದಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ  ಪಕ್ಷ ತೊರೆದು ಕಾಂಗ್ರೆಸ್  ಸೇರಿದ ನಂತರ ಕರ್ನಾಟಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕೇಸರಿ ಪಕ್ಷವು ಎಲ್ಲಾ 18 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳ ಹೆಸರನ್ನು ಒಂದೇ ಬಾರಿಗೆ ಬಿಡುಗಡೆ ಮಾಡಿದೆ. ಅರ್ಧದಷ್ಟು ಸ್ಥಾನಗಳಲ್ಲಿ ಪಕ್ಷವು ಭಾರಿ ಬಂಡಾಯ ಎದುರಿಸುತ್ತಿದೆ.

ಸವದತ್ತಿ ಕ್ಷೇತ್ರದಲ್ಲಿ  ಬಿಜೆಪಿ ಮುಖಂಡರು ಬಂಡಾಯ ಸ್ಫೋಟಗೊಂಡಿದೆ. ಬಿಡುಗಡೆಯಾದ ಪಟ್ಟಿಯಲ್ಲಿ ಬಿಜೆಪಿ ಇಬ್ಬರು ಹಾಲಿ ಶಾಸಕರು ಮತ್ತು ಅಥಣಿಯಲ್ಲಿ ಒಬ್ಬ ಎಂಎಲ್‌ಸಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಲಕ್ಷ್ಮಣ ಸವದಿ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ರಾಮದುರ್ಗದಲ್ಲಿ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಅವರು ಪಟ್ಟಿಯಲ್ಲಿ ಸ್ಥಾನ ಪಡೆಯದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಏಳು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಒಂದಾಗಿದ್ದಾರೆ. ಅವರಲ್ಲಿ ಒಬ್ಬರನ್ನು ಸ್ವತಂತ್ರವಾಗಿ ಕಣಕ್ಕಿಳಿಸಲಿದ್ದಾರೆ ಎಂದು ತಿಳಿದುಬಂದಿದೆ. ಕ್ಷೇತ್ರದ ಹೊರಗಿನವರಾದ ಚಿಕ್ಕರೇವಣ್ಣಗೆ ಪಕ್ಷ ಅಲ್ಲಿ ಟಿಕೆಟ್ ನೀಡಿದೆ.

ಬೆಳಗಾವಿ (ಉತ್ತರ) ಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಅವರಿಗೆ ಬಿಜೆಪಿ ಟಿಕೆಟ್‌ ನೀಡದೆ, ಡಾ. ರವಿ ಪಾಟೀಲ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಬೆನಕೆ ಅವರನ್ನು ಸೇರ್ಪಡೆಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದರೆ, ಈ ಸಾಧ್ಯತೆಗಳು ಕ್ಷೀಣವಾಗಿವೆ. ಬೆನಕೆ ಅವರಿಗೆ ಪಕ್ಷದ ಮೇಲೆ ಇನ್ನೂ ವಿಶ್ವಾಸವಿದೆ ಎಂದಿದ್ದಾರೆ. ಹುಕ್ಕೇರಿಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶಶಿಕಾಂತ ನಾಯ್ಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಅಲ್ಲಿ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಪುತ್ರ ನಿಖಿಲ್ ಕತ್ತಿ ಅವರನ್ನು ಆಯ್ಕೆ ಮಾಡಿದೆ. ಬೈಲಹೊಂಗಲದಲ್ಲಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ತಮ್ಮ ಹಿಂಬಾಲಕರೊಂದಿಗೆ ಪಕ್ಷ ತ್ಯಜಿಸುವುದಾಗಿ ಘೋಷಿಸಿದ್ದಾರೆ. ಕ್ಷೇತ್ರದಲ್ಲಿ ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಅವರಿಗೆ ಟಿಕೆಟ್ ಸಿಕ್ಕಿದೆ.

ಯಮಕನಮರಡಿಯಲ್ಲಿ ಬಿಜೆಪಿ ತೊರೆದು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಮಾರುತಿ ಅಸ್ತಗಿ ಘೋಷಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಅಸ್ತಗಿ ಅವರು ತೀವ್ರ ಪೈಪೋಟಿ ನೀಡಿ  ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಬಸವರಾಜ ಹುಂದ್ರಿ ಅವರನ್ನು ಆಯ್ಕೆ ಮಾಡಿದೆ.

ಖಾನಾಪುರದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಪಕ್ಷದ ನಿರ್ಧಾರದಿಂದ ಮಾಜಿ ಶಾಸಕ ಅರವಿಂದ ಪಾಟೀಲ್ ಮತ್ತು ಡಾ.ಸೋನಾಲಿ ಸರ್ನೋಬತ್ ಅವರಿಗೆ ನಿರಾಶೆ ಆಗಿದೆ. ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ ಇಬ್ಬರೂ ಹೇಳಿದ್ದಾರೆ. ಲಕ್ಷ್ಮಣ ಸವದಿ ಅವರು ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ (ಎಂಇಎಸ್) ಅರವಿಂದ ಪಾಟೀಲ್ ಅವರನ್ನು ಪಕ್ಷಕ್ಕೆ ಕರೆತಂದಿದ್ದರು, ಅವರಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು.

ಡಾ ಸರ್ನೋಬತ್ ಅವರು ಕಳೆದ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ, ಬಿಜೆಪಿ ವಿಠ್ಠಲ್ ಹಲಗೇಕರ ಅವರನ್ನು ಆಯ್ಕೆ ಮಾಡಿದೆ. ಬೆಳಗಾವಿ (ಗ್ರಾಮೀಣ)ದಲ್ಲಿ ರಮೇಶ್ ಜಾರಕಿಹೊಳಿ ನಿಷ್ಠಾವಂತ ನಾಗೇಶ್ ಮನ್ನೋಳ್ಕರ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಇದು ಪಕ್ಷದ ಜಿಲ್ಲಾ (ಗ್ರಾಮೀಣ) ಅಧ್ಯಕ್ಷ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ಅವರನ್ನು ಅಸಮಾಧಾನಗೊಳಿಸಿದೆ ಎಂದು ವರದಿಯಾಗಿದೆ. ಆದರೆ, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಚಿಕ್ಕೋಡಿ-ಸದಲಗಾದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅವರ ಒಪ್ಪಿಗೆಯಿಲ್ಲದೆ ಪಕ್ಷ ಅವರನ್ನು ಕಣಕ್ಕಿಳಿಸಿದೆ. ಪಕ್ಷದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಅವರು ಕ್ಷೇತ್ರದಲ್ಲಿ ಪ್ರಚಾರದಿಂದ ದೂರ ಉಳಿದಿದ್ದಾರೆ. ಬದಲಾಗಿ ಉಮೇಶ ಕತ್ತಿ ಪುತ್ರ ನಿಖಿಲ್ ಕತ್ತಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಬಿಜೆಪಿ ಅಲ್ಲಿ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಪುತ್ರ ನಿಖಿಲ್ ಕತ್ತಿ ಅವರನ್ನು ಆಯ್ಕೆ ಮಾಡಿದೆ. ಬೈಲಹೊಂಗಲದಲ್ಲಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ತಮ್ಮ ಹಿಂಬಾಲಕರೊಂದಿಗೆ ಪಕ್ಷ ತ್ಯಜಿಸುವುದಾಗಿ ಘೋಷಿಸಿದ್ದಾರೆ. ಕ್ಷೇತ್ರದಲ್ಲಿ ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಅವರಿಗೆ ಟಿಕೆಟ್ ಸಿಕ್ಕಿದೆ.