ಪ್ರಧಾನಿ ಮೋದಿ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಪಕ್ಕದಲ್ಲಿರುವ ಭ್ರಷ್ಟರು ಕಾಣುತ್ತಲ್ಲವೇ: ಸಿದ್ದು ಟೀಕಾ ಪ್ರಹಾರ

ಪ್ರಧಾನಿ ಮೋದಿ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಪಕ್ಕದಲ್ಲಿರುವ ಭ್ರಷ್ಟರು ಕಾಣುತ್ತಲ್ಲವೇ: ಸಿದ್ದು ಟೀಕಾ ಪ್ರಹಾರ

 

ಬೆಂಗಳೂರು: ‘ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ. ಅಲ್ಲಿರುವ ಅದಾನಿ, ಅಂಬಾನಿಗಳು, ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟಮುಖಗಳು ಕಾಣಲಿಲ್ಲವೇ?’

ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನರೇಂದ್ರ ಮೋದಿ ಆರೋಪಗಳಿಗೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಕಳೆದ ಮೂರೂವರೆ ವರ್ಷದಲ್ಲಿ ಒಂದೂವರೆ ಲಕ್ಷ ಕೋಟಿ ರು. ಹಣ ಲೂಟಿ ಮಾಡಿದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷ ಕಾಲ ಎಂದು ತಿರುಗೇಟು ನೀಡಿದ್ದಾರೆ.