ಬೆಂಗಳೂರು: ಪಂಚಮಸಾಲಿ ಸಮುದಾಯ ಕೇಳಿದ್ದು 2ಎ ಮೀಸಲಾತಿ ರಾಜ್ಯ ಸರ್ಕಾರ ಕೊಟ್ಟಿದ್ದು 2ಡಿ ಮೀಸಲಾತಿ ಅದು 2% ಹೆಚ್ಚಿಗೆ ಪಂಚಮಸಾಲಿ ಸಮುದಾಯವು ಮುಂದಿನ ಹೋರಾಟ ಯಾವ ರೀತಿ ಕೈ ಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕಳಿದ ಎರಡು ವರ್ಷಗಳಿಂದ ಸತತ ಹೋರಾಟ ಮಾಡುತ್ತಾ ಬಂದಿದ್ದಾರೆ . ಅವರು ಪ್ರಮುಖ ಬೇಡಿಕೆ ಈಡೇರಿಸುವ ಅವರ ಆಶಯವಾಗಿತ್ತು ಆದರೆ ರಾಜ್ಯ ಸರ್ಕಾರ 2ಡಿ ಮೀಸಲಾತಿಯನ್ನು ಕೊಟ್ಟು ಕೇವಲ ಎರಡು 2% ಮಾತ್ರ ಹೆಚ್ಚಿಗೆ ಮಾಡಿದೆ ಇದನ್ನು ಪಂಚಮಸಾಲಿ ಸಮುದಾಯವು ಯಾವ ರೀತಿ ಹೋರಾಟ ಮಾಡುತ್ತಿದೆ. ಎಂಬುದನ್ನು ಕಾದು ನೋಡಬೇಕಾಗಿದೆ. ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್ ನೀಡಿದ್ದು, ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.
ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ ಎಂದರು .2 ಸಿ ಅಡಿ ಒಕ್ಕಲಿಗರಿಗೆ ಶೇಕಡಾ 6 ರಷ್ಟು ಮೀಸಲಾತಿ ಹಾಗೂ 2 ಡಿ ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆ ಎಂದು ಹೇಳಲಾಗುತ್ತದೆ.