ಸಿಎಂ ಬಸವರಾಜ ಬೊಮ್ಮಾಯಿ  ಸಿದ್ದರಾಮಯ್ಯ ಅವರ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳು ಇಡೀ ಕುರುಬ ಸಮಾಜಕ್ಕೆ ಅವಮಾನ ? ಕಾಂಗ್ರೆಸ್‌ ಟ್ವೀಟ್

ಸಿಎಂ ಬಸವರಾಜ ಬೊಮ್ಮಾಯಿ  ಸಿದ್ದರಾಮಯ್ಯ ಅವರ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳು ಇಡೀ ಕುರುಬ ಸಮಾಜಕ್ಕೆ ಅವಮಾನ ? ಕಾಂಗ್ರೆಸ್‌ ಟ್ವೀಟ್

 

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಸಿಎಂ ಬೊಮ್ಮಾಯಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಕಾಂಗ್ರೆಸ್, ಬೊಮ್ಮಾಯಿವರು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವುದು ಲಿಂಗಾಯತರಿಗೆ ಮಾಡುವ ಅವಮಾನವಾಗುವುದಾದರೆ, ಸಿದ್ದರಾಮಯ್ಯವರ ಮೇಲೆ ಮಾಡುತ್ತಿರುವ ಸುಳ್ಳು ಆರೋಪಗಳು ಇಡೀ ಕುರುಬ ಸಮಾಜಕ್ಕೆ,‌ ಹಿಂದುಳಿದ ವರ್ಗಗಳಿಗೆ ಮಾಡುತ್ತಿರುವ ಅವಮಾನವಲ್ಲವೇ? ಎಂದು ಪ್ರಶ್ನಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳು ಇಡೀ ಕುರುಬ ಸಮಾಜಕ್ಕೆ ಮತ್ತು‌ ಹಿಂದುಳಿದ ವರ್ಗಗಳಿಗೆ ಮಾಡುತ್ತಿರುವ ಅವಮಾನವಲ್ಲವೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು.