ಬೆಳಗಾವಿ: ರಾಜ್ಯದ ಜನಸಂಖ್ಯೆ 6.95 ಕೋಟಿ ಎಂದು ಅಂದಾಜಿಸಲಾಗಿದೆ. ಈ ಪೈಕಿ ಉತ್ತರ ಕರ್ನಾಟಕ ಭಾಗದ ಜನಸಂಖ್ಯೆ 2,96,28,767 ಆಗಿದೆ. ಸುಮಾರು 4 ಕೋಟಿಗೂ ಅಧಿಕ ಜನರು ದಕ್ಷಿಣ ಕರ್ನಾಟಕ ಭಾಗದಲ್ಲಿ ವಾಸವಾಗಿದ್ದಾರೆ. 31 ಜಿಲ್ಲೆಗಳ ಪೈಕಿ 14 ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲಿವೆ. 224 ವಿಧಾನಸಭೆ ಕ್ಷೇತ್ರಗಳ ಪೈಕಿ 97 ವಿಧಾನಸಭೆ ಕ್ಷೇತ್ರಗಳು ಉತ್ತರ ಕರ್ನಾಟಕದಲ್ಲಿವೆ. ರಾಜ್ಯದ ಸರಾಸರಿ ತಲಾ ಆದಾಯ ರೂ.3,39,813 ಗಳಾಗಿದೆ. ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಫಲವಾಗಿ ತಲಾ ಆದಾಯ ಹೆಚ್ಚಾಗಿದೆ. ಆದರೆ ಉತ್ತರ ಕರ್ನಾಟಕದ 10 ಜಿಲ್ಲೆಗಳ ತಲಾ ಆದಾಯ ರೂ.2 ಲಕ್ಷಕ್ಕಿಂತ ಕಡಿಮೆಯಿದೆ. ಕಲಬುರ್ಗಿ ತಲಾ ಆದಾಯದಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು ಪ್ರಾದೇಶಿಕ ಅಸಮತೋಲವನ್ನು ಎತ್ತಿ ತೋರಿಸುತ್ತದೆ. ಅಸಮಾನತೆ ಇದ್ದರೆ ಸಂವಿಧಾನ ಧ್ಯೇಯೊದ್ದೇಶಗಳು ಈಡೇರಿಕೆಯಾಗುವುದಿಲ್ಲ. ಸ್ವಾತಂತ್ರ್ಯ ಪಡೆದಿದ್ದಕ್ಕೆ ಸಾರ್ಥಕತೆ ಇರುವುದಿಲ್ಲ ಎಂದು ಮುಖ್ಯಮುಂತ್ರಿ ಸಿದ್ದರಾಮಯ್ಯ ಹೇಳಿದರು.
ಉತ್ತರ ಕರ್ನಾಟಕದ 10 ಜಿಲ್ಲೆಗಳ ತಲಾ ಆದಾಯ ರೂ.2 ಲಕ್ಷಕ್ಕಿಂತ ಕಡಿಮೆ: ಸಿಎಂ:

























