ಸಿಎಂ ಹೇಳಿದ್ರು ಲೋಕಸಭೆಗೆ ಸ್ಪರ್ಧೆ ಮಾಡಲ್ಲ; ಪ್ರಕಾಶ್​​ ಹುಕ್ಕೇರಿ ಎಚ್ಚರಿಕೆ

ಸಿಎಂ ಹೇಳಿದ್ರು ಲೋಕಸಭೆಗೆ ಸ್ಪರ್ಧೆ ಮಾಡಲ್ಲ; ಪ್ರಕಾಶ್​​ ಹುಕ್ಕೇರಿ ಎಚ್ಚರಿಕೆ

 

ಚಿಕ್ಕೋಡಿ: ಸಿಎಂ ಸಿದ್ದರಾಮಯ್ಯನವರು ಹೇಳಿದರೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್​ಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಎಚ್ಚರಿಕೆ ರವಾನಿಸಿದ್ದಾರೆ.

ಕೆರೂರ ಗ್ರಾಮದಲ್ಲಿ ನಡೆದ ಸಂತುಬಾಯಿ ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಕಾಶ್ ಹುಕ್ಕೇರಿ, ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಚರ್ಚೆಯಾಗ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಫುಟ್ಬಾಲ್ ರೀತಿ ಬಳಸಿಕೊಳ್ಳಲಾಗಿದೆ. ಆದ್ರೆ ಯಾವುದೇ ಕಾರಣಕ್ಕೂ ನಾನು ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದರು. ಮೊದಲೊಮ್ಮೆ ಶಾಸಕ ಸ್ಥಾನದಲ್ಲಿ ಇದ್ದೆ, ರಾಜೀನಾಮೆ ಕೊಡಿಸಿ ಲೋಕಸಭೆಗೆ ಸ್ಪರ್ಧೆಗೆ ಇಳಿಸಿದರು

ಸದ್ಯ ನಾನು ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯನಾಗಿ ಕಾರ್ಯವನ್ನು ಮಾಡುತ್ತಿದ್ದೇನೆ. ಮತ್ತೆ ಲೋಕಸಭಾ ಸ್ಪರ್ಧೆ ಅಂದ್ರೆ ನನ್ನನ್ನು ಏನ್​ ಫುಟ್ಬಾಲ್ ರೀತಿ ತಿಳಿದಿದ್ದಾರೇನೋ? ನಾನು ಯಾವುದೇ ಕಾರಣಕ್ಕೂ ದೆಹಲಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.