ಬೆಂಗಳೂರು: ನಿಗಮ ಮಂಡಳಿಗೆ ನೇಮಕ ಸಂಬಂಧ ಪಟ್ಟಿ ಕೇಂದ್ರ ನಾಯಕರಿಗೆ ರವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ಸಂಜೆ ತಿಳಿಸಿದರು.
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಅನುಮತಿ ನೀಡಿದ ನಂತರ ನೇಮಕಾತಿ ಮಾಡುತ್ತೇವೆ ಎಂದರು.
ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. 2 ಹಾಗೂ 3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.