This is the title of the web page
This is the title of the web page

ಎಸ್‌ಎಂ ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ:  ದೂರದರ್ಶಿತ್ವ, ಶಿಸ್ತುಬದ್ಧ ಜೀವನ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿ ಎಂದ : ಸಿಎಂ ಸಿದ್ದರಾಮಯ್ಯ

ಎಸ್‌ಎಂ ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ:  ದೂರದರ್ಶಿತ್ವ, ಶಿಸ್ತುಬದ್ಧ ಜೀವನ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿ ಎಂದ : ಸಿಎಂ ಸಿದ್ದರಾಮಯ್ಯ

 

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆಂದು ಹೇಳಿದ್ದಾರೆ.