This is the title of the web page
This is the title of the web page

ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ

ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಸಿಎಂ ಸಿದ್ದರಾಮಯ್ಯ  ನಾಳೆ ಚಾಲನೆ

 

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದು, ಫಲಾನುಭವಿಗಳಿಗೆ ಖಾತೆಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆ ಜಮಾ ಆಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಮಾಹಿತಿ ನೀಡದ್ದಾರೆ.

2023 ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ 2 ವರ್ಷಗಳವರೆಗೆ ನಿರುದ್ಯೊಗ ಭತ್ಯೆ ನೀಡಲಾಗುವುದು. ಹಾಗೂ ಸ್ಕಿಲ್ ಕನೆಕ್ಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ತರಬೇತಿಯನ್ನು ನೀಡಲಾಗುವುದು. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆಯಾಗಿದ್ದು ಉದ್ಯೋಗವನ್ನು ಒದಗಿಸಲು ಸಹಕರಿಸುವುದು ಮತ್ತು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಪ್ರಸ್ತುತ 61,700 ಪದವಿ/ಡಿಪ್ಲೊಮಾ ಹೊಂದಿದ ಅಭ್ಯರ್ಥಿಗಳು ಈ ಯೋಜನೆಯಡಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2022-23 ರಲ್ಲಿ ಒಟ್ಟು 5.29 ಲಕ್ಷ ವಿದ್ಯಾರ್ಥಿಗಳು ಪದವಿ/ಡಿಪ್ಲೊಮಾ ಮುಗಿಸಿದ್ದಾರೆ. ವಿದ್ಯಾಭ್ಯಾಸ ಮುಗಿದು ಆರು ತಿಂಗಳಾದರೂ ಉದ್ಯೋಗ ಸಿಗದವರು ಫಲಾನುಭವಿಗಳಾಗಲು ಅರ್ಹರಿದ್ದಾರೆ. ನೋಂದಣಿ ಪ್ರಕ್ರಿಯೆ ಆನ್‍ಲೈನ್‍ನಲ್ಲಿ ಉಚಿತ ಮತ್ತು ಸರಳವಾಗಿದೆ ಎಂದರು.

ಯುವನಿಧಿ ಯೋಜನೆ ಅನುಷ್ಟಾನದ ಕುರಿತಾದ ವ್ಯವಸ್ಥೆಗಳು ಉತ್ತಮವಾಗಿ ನಡೆಯುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಾದ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಕಾರವಾರ, ಚಿತ್ರದುರ್ಗದಿಂದ ಸಹ ಯುಜನತೆ ಆಗಮಿಸಲಿದ್ದು 1.5 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಸಾಗಿವೆ. ಗೃಹಜ್ಯೋತಿ ಸುಮಾರು ಶೇ.90 ರಷ್ಟು, ಗೃಹಲಕ್ಷ್ಮಿ ಶೇ.93 ರಷ್ಟು, ಅನ್ನಭಾಗ್ಯ ಶೇ.96 ರಷ್ಟು ಬಳಕೆಯಾಗುತ್ತಿದ್ದು, ಶಕ್ತಿ ಯೋಜನೆ ಮುಖಾಂತರ 200 ಕೋಟಿ ಮಹಿಳೆಯರು ಕಳೆದ 5 ತಿಂಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಒಂದು ಗ್ರಾಮ ಪಂಚಾಯಿತಿಗೆ ಈ ಯೋಜನೆಗಳಿಂದ ಒಂದು ತಿಂಗಳಿಗೆ ಸುಮಾರು 75 ಲಕ್ಷದವರೆಗೆ ಅನುದಾನ ಲಭ್ಯವಾಗುತ್ತಿದೆ. ಹಾಗೂ ವರ್ಷಕ್ಕೆ ರೂ.8 ಕೋಟಿ ಕುಟುಂಬಗಳಿಗೆ ಸರಾಸರಿ ರೂ.5000 ಭತ್ಯೆ ದೊರೆಯುತ್ತಿದ್ದು ಸಾಮಾನ್ಯ ಜನರಿಗೆ

ಕಲಿಕೆ ಜೊತೆಗೆ ಕೌಶಲ್ಯಾಭಿವೃದ್ದಿ ಇಲಾಖೆ ಮೂಲಕ ಕೌಶಲ್ಯವನ್ನು ಕಲಿಸಲಾಗುತ್ತಿದ್ದು ಸರ್ಕಾರ ಯುವಜನತೆಗೆ ನಿರುದ್ಯೋಗ ಸಮಸ್ಯೆ ಎದುರಿಸಲು ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಇದರ ಸದುಪಯೋಗ ಪಡೆಯಬೇಕೆಂದರು.