This is the title of the web page
This is the title of the web page

ಧರ್ಮದ ಹೆಸರಲ್ಲಿ ಮರಳು ಮಾಡಿ ನಾವು ಅಧಿಕಾರ ನಡೆಸುವುದಿಲ್ಲ- ಸಿ.ಎಂ ಸಿದ್ದರಾಮಯ್ಯ.

ಧರ್ಮದ ಹೆಸರಲ್ಲಿ ಮರಳು ಮಾಡಿ ನಾವು ಅಧಿಕಾರ ನಡೆಸುವುದಿಲ್ಲ- ಸಿ.ಎಂ ಸಿದ್ದರಾಮಯ್ಯ.

ನೆಲಮಂಗಲ ಮಾ,4,:ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ. ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು.ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಕಾಂಗ್ರೆಸ್ ನಿಂದ ಗೆಲ್ಲಿಸಿ ಎಂದು ಕರೆ ನೀಡಿದರು.

ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಇದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಹೆಚ್. ಮುನಿಯಪ್ಪ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ , ಸಣ್ಣ ನೀರಾವರಿ, ವಿಜ್ಞಾನ & ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜ್ ಅವರೆ, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕ ಶರತ್ ಬಚ್ಚೇಗೌಡ , ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.