ಅಂತಾರಾಷ್ಟ್ರೀಯ ಮಹಿಳಾ ದಿನ ಮಹಿಳೆಯರುಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಅಂತಾರಾಷ್ಟ್ರೀಯ ಮಹಿಳಾ ದಿನ ಮಹಿಳೆಯರುಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು: ಸಿಎಂ ಸಿದ್ದರಾಮಯ್ಯ

 

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ನಮ್ಮ ಹಿಂದಿನ ಮತ್ತು ಇಂದಿನ ಸರ್ಕಾರದ ಅರ್ಧದಷ್ಟು ಯೋಜನೆಗಳು ಮಹಿಳಾಕೇಂದ್ರಿತವಾಗಿರುವುದನ್ನು ನಾಡು ಗಮನಿಸಿದೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಿ,

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು. ಲಿಂಗಾಧಾರಿತ ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಮಹಿಳೆಯರ ಹೋರಾಟದಲ್ಲಿ ನಾವೆಲ್ಲರೂ ಜೊತೆಯಲ್ಲಿ ನಿಲ್ಲಬೇಕು ಎಂದು ಹೇಳಿದ್ದಾರೆ.

ಅವಕಾಶಗಳಿಂದ ವಂಚಿತವಾಗಿರುವ ಮಹಿಳೆಯರಿಗೆ ಎಲ್ಲಾ ರಂಗಗಳಲ್ಲಿ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ದೊರಕುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಇದು ಬುದ್ಧ, ಬಸವಣ್ಣ, ಅಂಬೇಡ್ಕರರು ಸಾರಿದ ಸಮಸಮಾಜದ ಆಶಯ ಕೂಡ. ಈ ದಿಸೆಯಲ್ಲಿ ಪ್ರಯತ್ನಗಳು ಸಾಗಲಿ.ಈ ದಿನದ ಆಚರಣೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿದೆ ಎಂದು ತಿಳಿಸಿದ್ದಾರೆ.