This is the title of the web page
This is the title of the web page

ಸಂವಿಧಾನ ಉಳಿಯಬೇಕು ಎಂದರೆ ಕೇಂದ್ರದಲ್ಲಿ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.?  ಸಂವಿಧಾನದ ಮುಟಿದ್ರೆ ನೀವ್ ಬಿಜೆಪಿಯವರು ನಾಶವಾಗ್ತೀರಾ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಕೊಟ್ಟರು

ಸಂವಿಧಾನ ಉಳಿಯಬೇಕು ಎಂದರೆ ಕೇಂದ್ರದಲ್ಲಿ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.?  ಸಂವಿಧಾನದ ಮುಟಿದ್ರೆ ನೀವ್ ಬಿಜೆಪಿಯವರು ನಾಶವಾಗ್ತೀರಾ  ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಕೊಟ್ಟರು

 

ಮೈಸೂರು ಏ2: ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ. ಬಿಜೆಪಿಯವರಿಗೆ ಎಚ್ಚರಿಕೆ ಕೊಡುತ್ತೇನೆ. ಸಂವಿಧಾನ ಮುಟ್ಟಿದ್ರೆ ನೀವು ನಾಶವಾಗ್ತೀರಾ ಎಂದು ಸಿಎಂ ಸಿದ್ದರಾಮಯ್ಯ ನೇರಾನೇರ ಎಚ್ಚರಿಕೆ ಕೊಟ್ಟರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

ಶೂದ್ರರಿಗೆ ಬಿಜೆಪಿ ಆರ್ ಎಸ್ ಎಸ್ ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲ ಬಳಸಿಕೊಳ್ಳುತ್ತಾರೆ. ಆದರೆ ಆರ್ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ ಆರ್ ಎಸ್ ಎಸ್ ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು