ಮಂಗಳೂರು: ಕೇಂದ್ರ ಸರಕಾರದ ವಿರುದ್ದ, ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಿಂದ ಸೋಮವಾರ ಲೇಡಿಹಿಲ್ ನಿಂದ ಲಾಲ್ ಭಾಗ್ ವರೆಗೆ ಪಾದಯಾತ್ರೆ ನಡೆಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಸರಕಾರದ ವಿರುದ್ದ, ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಘೋಷಣೆ ಕೂಗಲಾಯಿತು. ಲಾಲ್ ಭಾಗ್ ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದೆ. ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.