This is the title of the web page
This is the title of the web page

ಸಂವಿಧಾನ ಬದಲಾವಣೆ : ಬಿಜೆಪಿ ಪಕ್ಷ ದಲಿತರ ವಿರೋಧಿ, ಸಂವಿಧಾನ ವಿರೋಧಿ ಎಂದು ಸಾಬೀತು ಮಾಡಿದೆ:.ಕಾಂಗ್ರೆಸ್ ಟ್ವೀಟ್ 

ಸಂವಿಧಾನ ಬದಲಾವಣೆ : ಬಿಜೆಪಿ ಪಕ್ಷ ದಲಿತರ ವಿರೋಧಿ, ಸಂವಿಧಾನ ವಿರೋಧಿ ಎಂದು ಸಾಬೀತು ಮಾಡಿದೆ:.ಕಾಂಗ್ರೆಸ್ ಟ್ವೀಟ್ 

 

ಬೆಂಗಳೂರು: ಮಾ.10 ಸಂವಿಧಾನದ ಬದಲಾವಣೆ : ಬಿಜೆಪಿ ಪಕ್ಷ ದಲಿತರ ವಿರೋಧಿ, ಸಂವಿಧಾನ ವಿರೋಧಿ ಎಂದು ಸಾಬೀತು ಮಾಡಿದೆ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಕುರಿತು ಕೆಂಡಕಾರಿರುವ ಕಾಂಗ್ರೆಸ್, ಬಿಜೆಪಿ ಅಜೆಂಡಾವನ್ನು ಸಂಸದರು ಹೊರಹಾಕಿದ್ದಾರೆ ಎಂದು ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ, ‘ನಾಲ್ಕೂವರೆ ವರ್ಷ ಮಲಗಿದ್ದು, ಚುನಾವಣೆಗಾಗಿ ಎದ್ದು ಬರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಎಂಬ ಕ್ರಿಮಿ ಸಂಸತ್ತಿನಲ್ಲಿ ಕರ್ನಾಟಕದ ಪರ, ತನ್ನ ಕ್ಷೇತ್ರದ ಪರ ಮಾತಾಡಿದ ಇತಿಹಾಸವೇ ಇಲ್ಲ. ದಲಿತರನ್ನು “ಬೊಗಳುವ ನಾಯಿಗಳು” ಎಂದು ಅವಮಾನಿಸಿದ್ದ ಈ ಕೋಮುಕ್ರಿಮಿಯನ್ನು ಪಕ್ಷದಲ್ಲಿ ಇಟ್ಟುಕೊಳ್ಳುವ ಮೂಲಕ ಬಿಜೆಪಿ ಪಕ್ಷ ದಲಿತ ವಿರೋಧಿ, ಸಂವಿಧಾನ ವಿರೋಧಿ ಎಂದು ಸಾಬೀತು ಮಾಡಿದೆ.

ಸಂವಿಧಾನದ ಅಡಿಯಲ್ಲಿ ನಡೆಯುತ್ತಿರುವ ಈ ದೇಶದಲ್ಲಿ ರಾಜಕೀಯ ಮಾಡುವುದಕ್ಕೆ, ಅಸ್ತಿತ್ವದಲ್ಲಿ ಇರುವುದಕ್ಕೆ ಬಿಜೆಪಿಗೆ ಅರ್ಹತೆ ಇಲ್ಲ. ದಲಿತರ ವಿರುದ್ಧ, ಸಂವಿಧಾನದ ವಿರುದ್ಧ ಸದಾ ಕಿಡಿಕಾರುವ ಬಿಜೆಪಿಯನ್ನು ಈ ರಾಜ್ಯದ ಹಾಗೂ ದೇಶದ ಜನ ತಿರಸ್ಕರಿಸುವುದು ಖಚಿತ ಎಂದು ಟ್ವೀಟ್ ಮಾಡಿದೆ.

ಇನ್ನು ಈ ಹಿಂದೆ ಸಂವಿಧಾನದ ಬದಲಾವಣೆ ಮಾಡಲು ನಾವು ಬಂದಿರೋದು ಎಂಬ ಅನಂತ್​ಕುಮಾರ್ ಹೆಗಡೆ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಮೂರು ತಿಂಗಳಿನಿಂದ ರಾಜಕೀಯ ಮುನ್ನಲೆಗೆ ಬಂದಿರೋ ಸಂಸದರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಮ್ಮ ಕ್ಷೇತ್ರದ ಪ್ರವಾಸ ಮಾಡುತ್ತಿದ್ದಾರೆ. ಈ ಬಾರಿ ತಾವು ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಹೇಳಿರುವ ಅನಂತ್​ಕುಮಾರ್ ಹೆಗಡೆ, ಉತ್ತರಕನ್ನಡ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.