ಬೆಳಗಾವಿ :ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.ಈ ಕುರಿತಾಗಿ ಸಂಜಯ್ ಪಾಟೀಲ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ಮನೆ ಎದುರು ಪ್ರತಿಭಟನೆ ಮಾಡಿದ್ದರು