ನವದೆಹಲಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯವನ್ನು ಪ್ರಧಾನಿ ಉಲ್ಲೇಖಿಸುತ್ತಿದ್ದಾರೆ ಮತ್ತು ಚುನಾವಣಾ ಲಾಭಕ್ಕಾಗಿ ದೇಶದಲ್ಲಿ ಕೋಮು ಧ್ರುವೀಕರಣವನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ
ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪ್ರಣಾಳಿಕೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಪ್ರಧಾನಿ ಭೇಟಿಗೆ ಸಮಯ ಕೋರಿದ್ದಾರೆ.
ಬಿಜೆಪಿ ಚುನಾವಣಾ ಲಾಭಕ್ಕಾಗಿ ಕೋಮು ಧ್ರುವೀಕರಣ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಮೋದಿ ಅವರು ಪ್ರಧಾನಿ ಹುದ್ದೆಗೆ ತಕ್ಕ ಹೇಳಿಕೆ ನೀಡಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಣಾಳಿಕೆಯ ಬಗ್ಗೆ “ಅರಿವು” ಮೂಡಿಸಲು ಪ್ರಧಾನಿ ಮೋದಿ ಭೇಟಿಗೆ ಅಪಾಯಿಂಟ್‌ಮೆಂಟ್ ಕೇಳಿದ್ದಾರೆ ಎಂದು ವೇಣುಗೋಪಾಲ್ ಹೇಳಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಪ್ರಧಾನಿ ಮೋದಿ ಆರೋಪಿಸಿದ್ದರು.