ಬೆಂಗಳೂರು: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಪ್ರಜಾಪ್ರಭುತ್ವ ನಾಶವಾಗುತ್ತದೆ ಎಂದು ಪುನರುಚ್ಚರಿಸಿದರು. ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಪ್ರಚಾರ ಆರಂಭಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಗುಲ್ಬರ್ಗ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಬಿಜೆಪಿಯಿಂದ 20 ಸ್ಥಾನಗಳನ್ನು ಕಾಂಗ್ರೆಸ್ ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ನಾಮನಿರ್ದೇಶನಗೊಂಡ ಎಲ್ಲಾ ನಾಯಕರ ಸಭೆಯನ್ನು ಮಾರ್ಚ್ 21 ರಂದು ಕರೆಯಲಾಗಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಾರ್ಚ್ 19 ಅಥವಾ 20 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಪ್ರಜಾಪ್ರಭುತ್ವ ನಾಶವಾಗುತ್ತದೆ ಎಂದು ಪುನರುಚ್ಚರಿಸಿದರು.
ಪ್ರಧಾನಿ ಮೋದಿಯವರು ಗುಲ್ಬರ್ಗದಿಂದ ತಮ್ಮ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವುದನ್ನು ನಾನು ಸ್ವಾಗತಿಸುತ್ತೇನೆ. ಅವರ ಒಡೆದು ಆಳುವ ನೀತಿ ಮತ್ತು ರಾಜಕಾರಣದಿಂದ ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿದ್ದಾರೆ. ನಾನು ಇದನ್ನು ಬಹಳ ದಿನಗಳಿಂದ ಹೇಳುತ್ತಿದ್ದೇನೆ. ಪ್ರಜಾಪ್ರಭುತ್ವ ಉಳಿಸಲು ಇದು ಕೊನೆಯ ಚುನಾವಣೆ. ಇದಾದ ನಂತರ ದೇಶದಲ್ಲಿ ಇನ್ನು ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದರು.