This is the title of the web page
This is the title of the web page

ಕೇಂದ್ರ ಸರರ್ಕಾರ ಮಲತಾಯಿ ಧೋರಣೆಯಿಂದ ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ,: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರರ್ಕಾರ ಮಲತಾಯಿ ಧೋರಣೆಯಿಂದ ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ,: ಡಿಸಿಎಂ ಡಿ.ಕೆ. ಶಿವಕುಮಾರ್

 

ಬೆಂಗಳೂರು: “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ.

“ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ. 7 ರಂದು ಕಾಂಗ್ರೆಸ್ ಸರಕಾರದ ಪ್ರತಿನಿಧಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆ.07 ರಂದು ದೆಹಲಿಯಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ.

ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್ ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಆರೋಪ್ಿಸಿದ್ದಾರೆ.

2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. . ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ.

ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ.

ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ.

ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.