ಬೆಂಗಳೂರು,ಮಾ,24:ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ವಿಚಾರದಲ್ಲಿ ಸರ್ಕಾರ ದ್ರೋಹವೆಸಗುತ್ತಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದರು.
ಎಸ್ ಸಿ ಎಸ್ ಟಿ ಮೀಸಲಾತಿ ವಿಚಾರದಲ್ಲಿ ದ್ರೋಹ, ಮೀಸಲಾತಿ ಜಾರಿಯಲ್ಲಿ ವಿಳಂಬ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.
ಆದರೆ ಕಾಂಗ್ರೆಸ್ ನಾಯಕರ ರಾಜಭವ ಚಲೋವನ್ನ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕಾಂಗ್ರೆಸ್ ನಾಯಕರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಲು ಮುಂದಾದರು.