This is the title of the web page
This is the title of the web page

ಭ್ರಷ್ಟ ಬಿಜೆಪಿಯಿಂದ ಅಭಿವೃದ್ಧಿ ಸಾಧ್ಯವಿಲ್ಲ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ; ಬಿಜೆಪಿಗೆ ವಿರುದ್ಧ ಸಿದ್ದು ವಾಗ್ದಾಳಿ

ಭ್ರಷ್ಟ ಬಿಜೆಪಿಯಿಂದ ಅಭಿವೃದ್ಧಿ ಸಾಧ್ಯವಿಲ್ಲ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ; ಬಿಜೆಪಿಗೆ ವಿರುದ್ಧ ಸಿದ್ದು ವಾಗ್ದಾಳಿ

 

ಸುಳ್ಳುಗಳನ್ನೇ ಜಾಸ್ತಿ ಹೇಳಿದ್ದಾರೆ. ಕಾರಣ ಸುಳ್ಳು ಹೇಳುವ ಬಿಜೆಪಿ ಮನೆಗೆ ಕಳುಹಿಸಿ ಕಾಂಗ್ರೆಸ್  ಗೆಲ್ಲಿಸಿ

ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ 40 % ಕಮಿಷನ್ ಕೇಳುತ್ತಿದ್ದಾರೆ ಎಂದು ಪತ್ರ ಬರೆದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಅರಭಾವಿ ಈ ಬಾರಿ ಕಾಂಗ್ರೆಸ್ ಬಾರಿ ಅಂತರಿಂದ ಗೆಲುವು ಸಿದ್ದರಾಮಯ್ಯ

ಮೂಡಲಗಿ: ಬಿಜೆಪಿಯಲ್ಲಿ ಹಿರಿಯರಿಗೆ ಬೆಲೆ ಇಲ್ಲ. ಸಾಕಷ್ಟು ಜನ ಹಿರಿಯರಿಗೆ ಅವಮಾನ ಮಾಡಿದ್ದಾರೆ. ಈ ಭ್ರಷ್ಟ ಬಿಜೆಪಿಯಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಜನಪರ ಕಾಳಜಿ ಇರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು.

ಮೂಡಲಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಅರಭಾವಿ ಮತಕ್ಷೇತ್ರದ ಪ್ರಜಾಧ್ವನಿ ಸಮಾವೇಶದಲ್ಲಿ ಅವರು ಮಾತನಾಡಿ, ಅರಭಾವಿ ಮತಕ್ಷೇತ್ರದ ಜನತೆ ಸೇವೆ ಮಾಡಲು ಮತದಾರರು ಅರವಿಂದ ದಳವಾಯಿಗೆ ಆಶೀರ್ವಾದ ಮಾಡಬೇಕು. ಅವರ ಮನವಿ ಮೇರೆಗೆ ಅರಭಾವಿ ಮತಕ್ಷೇತ್ರದಲ್ಲಿ ಪ್ರಚಾರಕ್ಕೆ ಆಗಮಿಸಿದ್ದೆವೆ ಮತದಾರರ ಮೇಲೆ ವಿಶ್ವಾಸವಿದೆ, ಅರವಿಂದ ಅವರನ್ನು ಭಾರೀ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಜನ ಸಾಮಾನ್ಯರ, ಹಿಂದುಳಿದವರ, ರೈತರ ಹಿತಾಸಕ್ತಿ ಬಿಜೆಪಿಯವರಿಗೆ ಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತ ಅಚ್ಚೆ ದಿನ್ ರಾಜ್ಯದ ಜನರಿಗೆ‌ ಬರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ 40 % ಕಮಿಷನ್ ಕೇಳುತ್ತಿದ್ದಾರೆ ಎಂದು ಪತ್ರ ಬರೆದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಾದರೆ ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಪ್ರಧಾನಿ ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಾತನಾಡಿ, 9 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಗಿಂತ
ಸುಳ್ಳುಗಳನ್ನೇ ಜಾಸ್ತಿ ಹೇಳಿದ್ದಾರೆ. ಕಾರಣ ಸುಳ್ಳು ಹೇಳುವ ಬಿಜೆಪಿಯವರನ್ನು ಮನೆಗೆ ಕಳುಹಿಸಿ ಕಾಂಗ್ರೆಸ್ ಗೆ ನಿಮ್ಮ ಅಮೂಲ್ಯ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಮಾತನಾಡಿ, ಅರಭಾವಿ ಮತಕ್ಷೇತ್ರದಲ್ಲಿ ಈ ಭಾರೀ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ನೂರಕ್ಕೆ ನೂರರಷ್ಟು ಸತ್ಯ. ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಂಎಲ್ ಸಿ ಪ್ರಕಾಶ ರಾಠೋಡ, ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ ಸೇರಿದಂತೆ ಹಲವು ಮುಖಂಡರು ಇದ್ದರು