ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.