This is the title of the web page
This is the title of the web page

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; ರಾಜ್ಯಕ್ಕೆ ಸವದತ್ತಿ ಪಸ್ಟ್

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; ರಾಜ್ಯಕ್ಕೆ ಸವದತ್ತಿ ಪಸ್ಟ್

 

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಳಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 83.89 ಫಲಿತಾಂಶ ಬಂದಿದೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದರೇ, ರಾಜ್ಯಕ್ಕೆ ಸವದತ್ತಿ ತಾಲೂಕಿನ ಮೂವರು ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್‌ ಪಡೆದುಕೊಂಡು, ಬೆಳಗಾವಿ ಕೀರ್ತಿ ಬೆಳೆಗಿದ್ದಾರೆ.

2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯದ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ ಶೇ. 86.74, ಅನುದಾನ ಶಾಲೆ ಶೇ. 85.64%, ಖಾಸಗಿ ಶೇ. 90.89% ಫಲಿತಾಂಶ ಸಾಧಿಸಿದೆ. 4 ಜನ ವಿದ್ಯಾರ್ಥಿಗಳು 625 ಅಂಕಗಳಿಸಿದ್ದಾರೆ.

ಗ್ರಾಮೀಣ ಮತ್ತು ಸರ್ಕಾರ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 3,41,108( 80.08%) ಹಾಗೂ ಬಾಲಕಿಯರು – 3,59,511( 87.98%) ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಮೊದಲ ಸ್ಥಾನವನ್ನು ಚಿತ್ರದುರ್ಗ (96.80%) ಹಾಗೂ ದ್ವಿತೀಯ ಸ್ಥಾನವನ್ನು ಮಂಡ್ಯ (96.74%), ತೃತೀಯ ಸ್ಥಾನವನ್ನು ಹಾಸನ (96.68%) ಜಿಲ್ಲೆ ಪಡೆದುಕೊಂಡಿದೆ. ಇನ್ನೂ ಕೊನೆ ಸ್ಥಾ‌ನದಲ್ಲಿ ಯಾದಗಿರಿ (75.49%) ಜಿಲ್ಲೆಯಿದೆ. ವಿದ್ಯಾರ್ಥಿಗಳು ಫೋಟೋ ‌ಕಾಪಿ ಪಡೆಯಲು ಮೇ 14 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನ, ಮರು ಎಣಿಕೆಗೆ ಮೇ 21 ಕೊನೆರಯ ದಿನವಾಗಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ 15 ಕೊನೆ ದಿನವಾಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ವೀಕ್ಷಿಸಬಹುದು.