ಚಿಕ್ಕಮಗಳೂರು:17 ಕಾರಣಗಳನ್ನು ನೀಡಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, . ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.