ಬೆಳಗಾವಿ:. ಅನೈತಿಕ ಸಂಬಂಧ ಹಿನ್ನೆಲೆ ವ್ಯಕ್ತಿಯ ಮೇಲೆ ಭೀಕರವಾಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ನಡೆದಿದೆ.
ನಜೀರ್ ಸಾಬ್ ಮಗದುಮ್ ಹಲ್ಲೆಗೊಳಗಾದವ. ಮುತ್ತು ಗಣಾಚಾರಿ ಹಲ್ಲೆ ಮಾಡಿದ ವ್ಯಕ್ತಿ. ಮುತ್ತು ಗಣಾಚಾರಿ ಹೆಂಡತಿಯೊಂದಿಗೆ ಹಲ್ಲೆಗೊಳಗಾದ ನಜೀರ್ ಸಾಬ ಅನೈತಿಕ ಸಂಬಂಧ ಹೊಂದಿದ್ದನು, ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಮಾರಕಾಸ್ತ್ರದಿಂದ ಭೀಕರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ನಜೀರ್ ಸಾಬ ಚಿಂತನಾ ಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ದೊಡವಾಡ ಹಾಗೂ ಬೈಲಹೊಂಗಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತ್ತೆಗೆ ಬಲೆ ಬಿಸಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ