ಕಾಂಗ್ರೆಸ್ಸಿನ ಪ್ರಮುಖ ನಾಯಕ ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ, ತಲೆಗೆ ಗಾಯ

ಕಾಂಗ್ರೆಸ್ಸಿನ ಪ್ರಮುಖ ನಾಯಕ ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ, ತಲೆಗೆ ಗಾಯ

ಕೊರಟಗೆರೆ, ಏ 28: ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕೊರಟಗೆರೆಯ ಬೈರನಹಳ್ಳಿಯಲ್ಲಿ ಕಲ್ಲು ತೂರಾಟ ನಡೆದಿದ್ದು ಅವರ ತಲೆಗೆ ಗಾಯವಾಗಿದೆ. ಪ್ರಚಾರ ಮಾಡುತ್ತಿದ್ದ ಗುಂಪಿನಲ್ಲಿದ್ದ ಕಿಡಿಗೇಡಿಗಳು ಕಲ್ಲು ತೂರಿದ್ದು, ಅವರ ತಲೆಗೆ ಕಲ್ಲು ತಾಗಿ ರಕ್ರಸ್ರಾವವಾಗಿದೆ ಎನ್ನಲಾಗಿದೆ.

ಶುಕ್ರವಾರ ಕೊರಟಗೆರೆ ತಾಲೂಕಿನ ಬೈರನಹಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಅವರ ಬೆಂಬಲಿಗರು ಅವರನ್ನು ಎತ್ತಿಕೊಂಡು ಕುಣಿಯುತ್ತಿದ್ದರು. ಆಗ ಗುಂಪಿನಿಂದ ಕಿಡಿಗೇಡಿಗಳು ಹೂವಿನ ಮಧ್ಯೆ ಕಲ್ಲೂ ತೂರಿದ್ದಾರೆ ಎನ್ನಲಾಗಿದೆ.

ಸದ್ಯ ಪರಮೇಶ್ವರ್‌ ಅವರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಪರಮೇಶ್ವರ್‌ ಅವರಿಗೆ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ರಕ್ತಸ್ರಾವವಾಗುತ್ತಿತ್ತು. ಕಲ್ಲು ಬಿದ್ದ ಕೂಡಲೇ ತಲೆಯನ್ನು ಹಿಡಿದುಕೊಂಡ ಜಿ. ಪರಮೇಶ್ವರ್​​ ಅವರಿಗೆ​ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ

ಅಂದು ಬುಧವಾರ ಜಿ ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಸಿದ್ದಗಂಗಾ ಶ್ರೀಗಳ ಗದ್ದುಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬಳಿಕ ನೂತನ ಶ್ರೀಗಳನ್ನು ಭೇಟಿ ಮಾಡಿದ ಅವರು ತಮ್ಮನ್ನು ಆಶೀರ್ವದಿಸುವಂತೆ ಕೋರಿದ್ದರು. ಬಳಿಕ ಮಠದಿಂದ ಹೊರಟ ಅವರು ಬೃಹತ್‌ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು.