This is the title of the web page
This is the title of the web page

ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿರುವ  ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ನನಗೆ ಟಿಕೆಟ್ ನೀಡದೆ ಹೈಕಮಾಂಡ್ ದ್ರೋಹ ಮಾಡಿದೆ

ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ – ಲಕ್ಷ್ಮಣ ಸವದಿ

ಬಿಜೆಪಿ ಸಚಿವರ ವಿರುದ್ಧ ಸ್ವಪಕ್ಷ ನಾಯಕರೇ ಕಿಡಿ

ಅಥಣಿ : ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿ ಕಾರಿರುವ ಲಕ್ಷ್ಮಣ ಸವದಿ, ಮುಂದಿನ ದಿನದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂಬ ಮಾತು ಹೇಳಿದ್ದಾರೆ. ಒಟ್ಟಿನಲ್ಲಿ ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುತ್ತಾರಾ.ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುವ ಮಾತನಾಡಿದ್ದಾರೆ.

ಅಥಣಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಇವರು. ನಾನು ಅಥಣಿ ಕ್ಷೇತ್ರದ ಮತದಾರರನ್ನು ನಂಬಿದವನು. ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ ನನಗೆ ಟಿಕೆಟ್ ನೀಡದೆ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿ ಕಾರಿರುವ ಲಕ್ಷ್ಮಣ ಸವದಿ, ಮುಂದಿನ ದಿನದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂಬ ಮಾತು ಹೇಳಿದ್ದಾರೆ.