ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆತಂರಿಕ ಕಲಹಗಳು ಹೆಚ್ಚಾಗುತ್ತಿದೆ ಎಂದು ತೋರುತ್ತಿದೆ. ಯಾಕೆಂದರೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆಎಸ್ ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ.
ತಾವು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ಈಶ್ವರಪ್ಪ ಪತ್ರದಲ್ಲಿ ವಿನಂತಿಸಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಅಭಿನಂದನೆಗಳನ್ನು ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ