ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಮತ್ತು 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ 1,168 ಮಂದಿ ಮನೆ ಆರೈಕೆಗೆ ಒಳಗಾದರೆ, 72 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
ಇಂದು ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.82 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.